×
Ad

ರಕ್ತನಿಧಿಗಳಲ್ಲಿ ರಕ್ತದ ಅಭಾವ ನೀಗಿಸಲು ರಕ್ತದಾನ ಶಿಬಿರ ಹೆಚ್ಚು ನಡೆಯಲಿ: ಎಂ.ಎಲ್.ಮೂರ್ತಿ

Update: 2020-04-16 22:10 IST

ಚಿಕ್ಕಮಗಳೂರು, ಎ.16: ರಾಷ್ಟ್ರ ಮತ್ತು ರಾಜ್ಯದಲ್ಲಿ ಕೊರೊನಾ ಭೀತಿಯಿಂದ ಲಾಕ್‍ಡೌನ್ ಜಾರಿಯಲ್ಲಿದೆ. ಈ ಹಿನ್ನಲೆಯಲ್ಲಿ ಬ್ಲಡ್ ಬ್ಯಾಂಕಿನಲ್ಲಾಗಿರುವ ರಕ್ತದ ಅಭಾವ ನೀಗಿಸಲು ಕಾಂಗ್ರೆಸ್‍ನ ಎನ್.ಎಸ್.ಯು.ಐ ಘಟಕದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೇಸ್ ಟಾಸ್ಕ್‍ಫೋರ್ಸ್ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಎಲ್.ಮೂರ್ತಿ ತಿಳಿಸಿದರು.

ನಗರದ ಹೋಲಿಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಎನ್.ಎಸ್.ಯು.ಐ ಘಟಕದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ ಹಿನ್ನಲೆಯಲ್ಲಿ ಮತ್ತು ರಾಜ್ಯದಲ್ಲಿ ಬ್ಲಡ್ ಬ್ಯಾಂಕುಗಳಲ್ಲಿ ಆಗಿರುವ ರಕ್ತದ ಅಭಾವ ನೀಗಿಸಲು ಕಾಂಗ್ರೆಸ್ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ಮಾಜಿ ಅಧ್ಯಕ್ಷ ಡಾ.ವಿಜಯ್‍ಕುಮಾರ್ ಮಾತನಾಡಿ, ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಡವರಿಗೆ ಆಹಾರದ ಕಿಟ್ ಊಟದ ವ್ಯವಸ್ಥೆ ಮತ್ತು ಮನೆ ಭಾಗಿಲಿಗೆ ಮಾತ್ರೆಗಳನ್ನು ನೀಡಿ ನೊಂದವರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಇಂದು ಪಕ್ಷದ ಕಾರ್ಯಕರ್ತರು ದಾನ ದಾನದಲ್ಲಿ ಶ್ರೇಷ್ಠದಾನವಾದ ರಕ್ತವನ್ನು ನೀಡಿ ಜನರ ಸಮಸ್ಯೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದರು.

ಕಾಂಗ್ರೇಸ್‍ಜಿಲ್ಲಾಧ್ಯಕ್ಷ ಡಾ.ಅಂಶುಮಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಂ.ಸಂದೀಪ್, ಎನ್.ಎಸ್.ಯು.ಐ ಅಧ್ಯಕ್ಷ ಆದಿಲ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಶಿವಾನಂದ್‍ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ರಾಯಲ್ ಶರೀಫ್, ಅಕ್ಬರ್, ರಿಯಾಝ್ ಅಹ್ಮದ್, ಸಚಿನ್, ಸೈಫ್‍ಆಲಿ ಮತ್ತಿತರರು ಶಿಬಿರದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News