ಕೊರೋನ: ರಾಜ್ಯದಲ್ಲಿ ಮತ್ತೆ 38 ಮಂದಿಯಲ್ಲಿ ಸೋಂಕು ಪತ್ತೆ, ಒಟ್ಟು ಸಂಖ್ಯೆ 353ಕ್ಕೆ ಏರಿಕೆ
ಬೆಂಗಳೂರು, ಎ.17: ರಾಜ್ಯದಲ್ಲಿ 11 ವರ್ಷದೊಳಗಿನ ಐವರು ಮಕ್ಕಳು ಸೇರಿದಂತೆ ಸೇರಿದಂತೆ ಮತ್ತೆ 38 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 353ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ಗುರುವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ ರಾಜ್ಯದಲ್ಲಿ 38 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.
ಈ ಪೈಕಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ 10 ವರ್ಷದ ಬಾಲಕಿಯೊಬ್ಬಳು ಸೇರಿದಂತೆ ಒಂದೇ ಕುಟುಂಬದ 7 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಮೈಸೂರಿನಲ್ಲಿ 12, ಬೆಂಗಳೂರು ನಗರದಲ್ಲಿ 9, ಮಂಡ್ಯ 3, ಚಿಕ್ಕಬಳ್ಳಾಪುರ 3, ವಿಜಯಪುರ 2, ದ.ಕ. ಮತ್ತು ಬೀದರ್‌ನಲ್ಲಿ ತಲಾ 1 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಈ ನಡುವೆ ರಾಜ್ಯದಲ್ಲಿ ಕೊರೋನ ಸೋಂಕಿಗೊಳದ ಒಟ್ಟು 353 ಮಂದಿಯ ಪೈಕಿ 82 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 13 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 38 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 353ಕ್ಕೆ ಏರಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಪಾಲಿಸಿ, ಮನೆಯಲ್ಲಿಯೇ ಇರಬೇಕೆಂದು ವಿನಂತಿಸುತ್ತೇನೆ.#ಮನೆಯಲ್ಲೇಇರಿ pic.twitter.com/AU2WlSxVSx
— B Sriramulu (@sriramulubjp) April 17, 2020