ರಾಜ್ಯಕ್ಕೆ 5 ಲಕ್ಷ ಪಿಪಿಇ ಕಿಟ್‍ಗಳ ಅಗತ್ಯವಿದೆ: ಹೈಕೋರ್ಟ್‍ಗೆ ರಾಜ್ಯ ಸರಕಾರದ ಹೇಳಿಕೆ
Update: 2020-04-17 19:43 IST
ಬೆಂಗಳೂರು, ಎ.17: ರಾಜ್ಯದಲ್ಲಿ ಐದು ಲಕ್ಷ ಪಿಪಿಇ ಕಿಟ್‍ಗಳ ಅಗತ್ಯವಿದ್ದು, ಇದಕ್ಕಾಗಿ ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ತಿಳಿಸಿದೆ.
ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಲಾಗಿದೆ.
ವಿಚಾರಣೆ ವೇಳೆ ಸರಕಾರದ ಪರ ವಕೀಲ ವಿಕ್ರಮ್ ಹುಯಿಲಗೋಳ ಅವರು ಲಿಖಿತ ವಾದ ಮಂಡಿಸಿ, ಕೇಂದ್ರ ಸರಕಾರವೇ ಇಡೀ ದೇಶಕ್ಕೆ ಪಿಪಿಇ ಕಿಟ್‍ಗಳನ್ನು ಪೂರೈಸುತ್ತಿದೆ. ಬೇಡಿಕೆಗೆ ತಕ್ಕಂತೆ ಪಿಪಿಇ ಕಿಟ್ ಪೂರೈಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಳ್ಳುತ್ತಿದೆ ಎಂದರು.