ತುಮಕೂರು ಜಿಲ್ಲೆಯಲ್ಲಿ 549 ವರದಿಗಳು ನೆಗೆಟಿವ್: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ

Update: 2020-04-17 14:49 GMT
ಸಾಂದರ್ಭಿಕ ಚಿತ್ರ

ತುಮಕೂರು, ಎ.17: ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 33 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ತಿಳಿಸಿದ್ದಾರೆ.

ಒಟ್ಟು 288 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, 337 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆಗೂ 617 ಜನರ ಗಂಟಲು ಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 549 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿತ್ತು. ಅವರಲ್ಲಿ ಒಬ್ಬರು ಮೃತಪಟ್ಟಿರುತ್ತಾರೆ. ಒಬ್ಬರು ಗುಣಮುಖರಾಗಿದ್ದಾರೆ. ಇನ್ನು 5 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ 61 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಾ.ಚಂದ್ರಿಕಾ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News