ಕೋಮು ಪ್ರಚೋದಕ ಪೋಸ್ಟ್ : ಆರೋಪಿ ವಿರುದ್ಧ ಪ್ರಕರಣ ದಾಖಲು
Update: 2020-04-17 22:33 IST
ಮಂಗಳೂರು, ಎ.17: ಸಾಮಾಜಿಕ ಜಾಲತಾಣದಲ್ಲಿ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಬರಹಗಳನ್ನು ಪ್ರಕಟಿಸಿದ ಆರೋಪದಲ್ಲಿ ಮಂಗಳೂರಿನ ವಿಶ್ವ ಎಂಬಾತನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ರೀತಿಯಲ್ಲಿ ಬರಹಗಳನ್ನು ಈತ ಪ್ರಕಟಿಸಿದ್ದ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಆಯುಕ್ತರು ಯಾರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಿತ ಬರಹ ಪ್ರಕಟಿಸಬಾರದು. ಅಂತಹವರ ವಿರುದ್ಧ ನಿಗಾ ಇಡಲಾಗಿದ್ದು, ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.