ಲಾಕ್ ಡೌನ್ ಉಲ್ಲಂಘಿಸಿ ರಾವೂರು ರಥೋತ್ಸವ: 8 ಮಂದಿ ಸೆರೆ
Update: 2020-04-18 13:28 IST
ಕಲಬುರಗಿ : ಲಾಕ್ ಡೌನ್ ಉಲ್ಲಂಘಿಸಿ ಎ. 16 ರಂದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಜಾತ್ರೆ, ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ, ಮಠದ 20 ಮಂದಿ ಹಾಗೂ 150ಕ್ಕೂ ಹೆಚ್ಚು ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಐವರನ್ನು ಬಂಧಿಸಿ, ಎಂಟಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಸದ್ಯ ರಾವೂರು ಗ್ರಾಮದಲ್ಲಿ 14 ದಿನ ಸೀಲ್ ಡೌನ್ ಮಾಡಲಾಗಿದೆ ಎಂದು ಈ ಸಂದರ್ಭ ತಿಳಿಸಿದರು.