ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಗೆ ಕೊರೋನ ದೃಢ: ರಾಜ್ಯದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆ
Update: 2020-04-18 17:43 IST
ಬೆಂಗಳೂರು, ಎ.18: ಎ.16 ರಂದು ಹೃದಯಾಘಾತದಿಂದ ಮೃತಪಟ್ಟ 42 ವರ್ಷದ ವ್ಯಕ್ತಿಯ ವರದಿ ಪಾಸಿಟಿವ್ ಆಗುವುದರೊಂದಿಗೆ ರಾಜ್ಯದಲ್ಲಿ ಕೊರೋನದಿಂದ ಮೃತರಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅಲ್ಲದೇ, ಶನಿವಾರ ಮತ್ತೆ 25 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 384ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5 ಗಂಟೆಯೊಳಗೆ ರಾಜ್ಯದಲ್ಲಿ 25 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.
ಈ ನಡುವೆ ರಾಜ್ಯದಲ್ಲಿ ಕೊರೋನ ಸೋಂಕಿಗೊಳದ ಒಟ್ಟು 384 ಮಂದಿಯ ಪೈಕಿ 104 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 14 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.