ಕಾರು ಢಿಕ್ಕಿ: ಪಾದಚಾರಿ ಮೃತ್ಯು
Update: 2020-04-18 21:34 IST
ಉಡುಪಿ, ಎ.18: ಅಜ್ಜರಕಾಡು ಬಳಿ ಪ್ರಗತಿ ರೆಸಿಡೆನ್ಸಿ ಎದುರು ಎ.18 ರಂದು ಬೆಳಗ್ಗೆ 11.30ರ ಸುಮಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಶ್ರೀಧರ ನಾಯ್ಕ್(71) ಎಂದು ಗುರುತಿಸಲಾಗಿದೆ. ಬ್ರಹ್ಮಗಿರಿ ಕಡೆಯಿಂದ ಜೋಡುಕಟ್ಟೆ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಶ್ರೀಧರ್ ನಾಯ್ಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಇವರು, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.