×
Ad

ಕಟ್ಟಡ ಕಾರ್ಮಿಕರ ಖಾತೆಗೆ 2,000 ರೂ. ಜಮೆ : ಸಚಿವ ಕೋಟ

Update: 2020-04-18 21:56 IST

ಮಂಗಳೂರು, ಎ.18: ರಾಜ್ಯ ಸರಕಾರವು ಕಟ್ಟಡ ಕಾರ್ಮಿಕರಿಗೆ 2,000 ರೂ. ನೆರವು ಘೋಷಿಸಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6,122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ತಿಳಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಈ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಕೊರೋನ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ನಿಧಿಯಿಂದ ಈ ಮೊತ್ತ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ 6,122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಉಳಿದವರಿಗೆ ಶೀಘ್ರದಲ್ಲೇ ಜಮೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News