ಕಲಬುರಗಿ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅಂತ್ಯಕ್ರಿಯೆ; 8 ಮಂದಿ ವಿರುದ್ಧ ಪ್ರಕರಣ ದಾಖಲು
Update: 2020-04-19 16:21 IST
ಕಲಬುರಗಿ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ನಗರದ ಕೆಂಚ ಬಸವೇಶ್ವರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ ಆರೋಪದಲ್ಲಿ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಅಂತ್ಯಕ್ರಿಯೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಲ್ಲಿನ ಠಾಣೆ ಪೊಲೀಸರು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ನಗರದ ಇಸ್ಲಾಮಾಬಾದ್ ಕಾಲನಿಯ ನಿವಾಸಿ ರಾಮ್ ಗೌಳಿ ಎಂಬವರು ಮೃತಪಟ್ಟಿದ್ದು, ಲಾಕ್ ಡೌನ್ ನಡುವೆಯು ಕೆಂಚಬಸವೇಶ್ವರ ರುದ್ರಭೂಮಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಮಂದಿ ಸೇರಿರುವುದು ಕಂಡು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.