ಎ.21ರವರೆಗೆ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರಕಾರ ಆದೇಶ
Update: 2020-04-19 21:41 IST
ಬೆಂಗಳೂರು, ಎ.19: ರಾಜ್ಯದಲ್ಲಿನ ಮಾರಕ ಕೊರೋನ ವೈರಸ್ ಸೋಕು ತಡೆಗಟ್ಟುವ ದೃಷ್ಟಿಯಿಂದ ಹೇರಿರುವ ಲಾಕ್‍ಡೌನ್ ಅನ್ನು ಎ.21ರ ಮಧ್ಯರಾತ್ರಿಯ ವರೆಗೆ ಮುಂದುವರಿಸಲು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಸಿ.ಎಸ್.ವಿಜಯ್ ಭಾಸ್ಕರ್ ಅವರು, ಎಲ್ಲ ಇಲಾಖಾ ಮುಖ್ಯಸ್ಥರುಗಳಿಗೆ, ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ 'ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರಕಾರದ ಪ್ರಸ್ತುತ ಜಾರಿಯಲ್ಲಿರುತ್ತದೆ. ಕೇಂದ್ರ ಸರಕಾರ ಮೇ 3ರ ವರೆಗೆ ಲಾಕ್‍ಡೌನ್ ಆದೇಶ ಹೊರಡಿಸಿದೆ' ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.