×
Ad

ಲಾಕ್​ಡೌನ್ ನಡುವೆ ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಯುವತಿಯರು !

Update: 2020-04-19 21:58 IST

ಬೆಂಗಳೂರು, ಎ.19: ವೇಗವಾಗಿ ವಾಹನ ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಇನ್‍ಸ್ಪೆಕ್ಟರ್ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಯುವತಿಯರು ಪರಾರಿಯಾಗಿರುವ ಘಟನೆ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಲಾಕ್‍ಡೌನ್ ಸಂಬಂಧ ನಗರದ ಲೀಲಾ ಪ್ಯಾಲೇಸ್ ಬಳಿ ಚೆಕ್‍ಪೋಸ್ಟ್ ನಿರ್ಮಿಸಲಾಗಿದ್ದು, ರವಿವಾರವೂ ತಪಾಸಣೆ ಪ್ರಕ್ರಿಯೆಯನ್ನು ಮುಂದುವರೆಸಲಾಗಿತ್ತು. ಈ ಸಂದರ್ಭದಲ್ಲಿ ಕಾರನ್ನು ಶರವೇಗವಾಗಿ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದರು. ಇದನ್ನು ದೂರದಿಂದಲೇ ಗಮನಿಸಿದ ಪೊಲೀಸರು ಕಾರನ್ನು ತಡೆದಿದ್ದಾರೆ ಎನ್ನಲಾಗಿದೆ.

ಬಳಿಕ ಯುವತಿಯರು ಪೊಲೀಸರೊಂದಿಗೆ ವಾಗ್ದಾದ ನಡೆಸಿದಾಗ, ಹೊಯ್ಸಳ ವಾಹನವನ್ನು ಸ್ಥಳಕ್ಕೆ ಕರೆಸಿದ್ದ ಪೊಲೀಸರು, ಯುವತಿಯರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಕಾರಿನಲ್ಲಿ ಠಾಣೆಗೆ ಬರುವುದಾಗಿ ಹೇಳಿ ಕಾರು ಹತ್ತಿದ ಯುವತಿಯರು, ಎದುರು ನಿಂತಿದ್ದ ಇನ್‍ಸ್ಪೆಕ್ಟರ್ ಹಾಗೂ ಸಿಬ್ಬಂದಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯರು ಮದ್ಯದ ಅಮಲಿನಲ್ಲಿದ್ದ ಬಗ್ಗೆ ಅನುಮಾನ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವ ಮುನ್ನವೇ ಪರಾರಿಯಾಗಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ಶೋಧ ಕಾರ್ಯ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News