×
Ad

ಬೆಂಗಳೂರು: ಸಯ್ಯದಾ ಝೈನಬ್ ಎಜುಕೇಷನ್ ಟ್ರಸ್ಟ್ ನಿಂದ 45 ಸಾವಿರ ಕಿಟ್ ವಿತರಣೆ

Update: 2020-04-19 23:57 IST

ಬೆಂಗಳೂರು, ಎ.19: ಬೆಂಗಳೂರಿನ ಶಿವಾಜಿನಗರದಲ್ಲಿರುವ ಸಯ್ಯದಾ ಝೈನಬ್ ಎಜುಕೇಷನ್ ಟ್ರಸ್ಟ್ ವತಿಯಿಂದ ಬಡವರು, ಕೂಲಿ ಕಾರ್ಮಿಕರು, ದಿನಗೂಲಿ ನೌಕಕರ ಸುಮಾರು 45 ಸಾವಿರ ಕುಟುಂಬಗಳಿಗೆ ರೇಷನ್ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ನಗರದ ಬಹುತೇಕ ಸ್ಲಂಗಳು, ಮೊಹಲ್ಲಾಗಳಲ್ಲಿ ಜಾತಿ, ಧರ್ಮದ ಬೇಧವಿಲ್ಲದೆ, ಈಗಾಗಲೆ 25 ಸಾವಿರ ಬಡ ಕುಟುಂಬಗಳಿಗೆ 10 ಕೆಜಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ಇನ್ನಿತರ ದಿನಸಿ ಪದಾರ್ಥಗಳನ್ನು ಒಳಗೊಂಡ ಕಿಟ್ ವಿತರಿಸಲಾಗಿದೆ ಎಂದು ಸಯ್ಯದಾ ಝೈನಬ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಅತೀಖ್ ಅಹ್ಮದ್ ತಿಳಿಸಿದ್ದಾರೆ.

ಇಂದಿನಿಂದ 20 ಸಾವಿರ ಕಿಟ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸಂಸ್ಥೆಯ ಕಾರ್ಯಕರ್ತರು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರಕಾರ ಸೂಚಿಸಿರುವ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಡ ಕುಟುಂಬಗಳ ಮನೆ ಬಾಗಿಲಿಗೆ ರೇಷನ್ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News