ಪಾದರಾಯನಪುರ ಪ್ರಕರಣ ಖಂಡನೀಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕುಮಾರಸ್ವಾಮಿ ಆಗ್ರಹ

Update: 2020-04-20 05:39 GMT

ಬೆಂಗಳೂರು, ಎ.20: ನಗರದ ಪಾದರಾಯನಪುರದಲ್ಲಿ ಕೊರೋನ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡುವ ಸಂದರ್ಭ ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ

ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ’ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಅವರು ಅವರು ಟ್ವೀಟ್ ಮಾಡಿದ್ದಾರೆ

ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರ ಹೆಡೆಮುರಿ ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News