ಬಿಬಿಎಂಪಿ 2020-21ನೇ ಸಾಲಿನ ಬಜೆಟ್ ಮಂಡನೆ
Update: 2020-04-20 13:17 IST
ಬೆಂಗಳೂರು, ಎ.20: ಕೊರೋನ ಲಾಕ್ ಡೌನ್ ಹಿನ್ನೆಲೆ ಬಿಬಿಎಂಪಿ 2020-21ನೇ ಆಯವ್ಯಯವನ್ನು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ಮಂಡನೆ ಮಾಡಿದರು.
10,899.23 ಕೋಟಿ ರೂ.ನ ಬಜೆಟ್ ಇಂದು ಮಂಡಿಸಲಾಗಿದೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಸಂಸದ ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮಮೋಹನ್ ರಾಜು, ವಿಪಕ್ಷದ ನಾಯಕ ಅಬ್ದುಲ್ ವಾಜೀದ್, ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.