×
Ad

ರಾಜ್ಯದಲ್ಲಿ 400 ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ

Update: 2020-04-20 17:41 IST

ಬೆಂಗಳೂರು, ಎ.20: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದ್ದು, ಸೋಮವಾರ 18 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 408 ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಸೋಂಕಿತರಲ್ಲಿ 16 ಜನರು ಮರಣ ಹೊಂದಿದ್ದು, 112 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 280 ಸಕ್ರಿಯ ರೋಗಿಗಗಳಲ್ಲಿ 278 ಜನರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರನ್ನು ಐಸಿಯುನಲ್ಲಿಡಲಾಗಿದೆ.

ಸೋಂಕಿತರ ವಿವರ:

ರೋಗಿ 391: ಕಲಬುರಗಿ ಜಿಲ್ಲೆಯ 17 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 175 ರ ಸಂಪರ್ಕಿತರಾಗಿದ್ದಾರೆ.
ರೋಗಿ 392: ಕಲಬುರಗಿ ಜಿಲ್ಲೆಯ 13 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 393: ಕಲಬುರಗಿ ಜಿಲ್ಲೆಯ 30 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 394: ಕಲಬುರಗಿ ಜಿಲ್ಲೆಯ 50 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 175 ರ ಸಂಪರ್ಕಿತರಾಗಿದ್ದಾರೆ.
ರೋಗಿ 395: ಕಲಬುರಗಿ ಜಿಲ್ಲೆಯ 19 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 205 ರ ಸಂಪರ್ಕಿತರಾಗಿದ್ದಾರೆ.
ರೋಗಿ 396: ಗದಗ ಜಿಲ್ಲೆಯ 24 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 370ರ ದ್ವಿತೀಯ ಸಂಪರ್ಕದಲ್ಲಿದ್ದರು.
ರೋಗಿ 397: ವಿಜಯಪುರ ಜಿಲ್ಲೆಯ 7 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 398: ವಿಜಯಪುರ ಜಿಲ್ಲೆಯ 36 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 399: ವಿಜಯಪುರ ಜಿಲ್ಲೆಯ 27 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 400: ವಿಜಯಪುರ ಜಿಲ್ಲೆಯ 25 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 401: ವಿಜಯಪುರ ಜಿಲ್ಲೆಯ 21 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 402: ವಿಜಯಪುರ ಜಿಲ್ಲೆಯ 28 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 403: ವಿಜಯಪುರ ಜಿಲ್ಲೆಯ 47 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 362 ಸಂಪರ್ಕಿತರಾಗಿದ್ದಾರೆ.
ರೋಗಿ 404: ವಿಜಯಪುರ ಜಿಲ್ಲೆಯ 10 ವರ್ಷದ ಬಾಲಕರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 405: ವಿಜಯಪುರ ಜಿಲ್ಲೆಯ 34 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 228 ಸಂಪರ್ಕಿತರಾಗಿದ್ದಾರೆ.
ರೋಗಿ 406: ವಿಜಯಪುರ ಜಿಲ್ಲೆಯ 38 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 407: ವಿಜಯಪುರ ಜಿಲ್ಲೆಯ 14 ವರ್ಷದ ಬಾಲಕರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 221 ಸಂಪರ್ಕಿತರಾಗಿದ್ದಾರೆ.
ರೋಗಿ 408: ಬೀದರ್ ಜಿಲ್ಲೆಯ 27 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 117 ಸಂಪರ್ಕಿತರಾಗಿದ್ದಾರೆ.
ಕೋವಿಡ್-19 ನಿಯಂತ್ರಣದಡಿ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಎಲ್ಲ ಕ್ರಮಗಳನ್ನು ಎ.21 ರವರೆಗೂ ಮುಂದುವರಿಸಲು ಆದೇಶಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 19 ವಲಯಗಳನ್ನು ಕೋವಿಡ್-19 ಕನ್‍ಟೈನ್‍ಮೆಂಟ್ ಜೋನ್‍ಗಳೆಂದು ಗುರುತಿಸಲಾಗಿದೆ.

ಇ ಕಾಮರ್ಸ್ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಸರಪಳಿಯ ಸುಗಮ ಚಲನೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಕೇಂದ್ರ ಸರಕಾರವು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News