×
Ad

​‘ಉಡುಪಿ ಜಿಲ್ಲೆಯಲ್ಲಿ ನಿರಾಶ್ರಿತರ ಸಮಸ್ಯೆಗಳಿಗೆ ಉತ್ತಮ ಸ್ಪಂದನೆ’

Update: 2020-04-20 18:59 IST

ಉಡುಪಿ, ಎ.20: ದೇಶದಾದ್ಯಂತ ಕೊರೋನಾ ವೈರಸ್ ಸಮಸ್ಯೆ ದಿನೆದಿನೇ ಉಲ್ಬಣಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಡಳಿತ ದೊಂದಿಗೆ ಕೈಜೋಡಿಸಿರುವ ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರು, ನಿರಾಶ್ರಿತರು ಮತ್ತು ಬಡ ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂಧಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ 26 ದಿನಗಳಿಂದ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಜಿಲ್ಲಾ ಮಟ್ಟದ ಕಾರ್ಯಕರ್ತರು, ಶಾಸಕರು, ಸಂಸದರು, ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು ಕೊರೋನ ಲಾಕ್‌ಡೌನ್‌ನಿಂದ ಸಾರ್ವಜನಿಕರಿಗೆ ಆಗಿರುವ ಸಮಸ್ಯೆಗೆ ಸ್ಪಂದನೆ ನೀಡುತಿದ್ದಾರೆ ಎಂದವರು ತಿಳಿಸಿದ್ದಾರೆ.

ಪ್ರತಿ ದಿನ ಜಿಲ್ಲೆಯಲ್ಲಿರುವ ಒಟ್ಟು 1111 ಮತಗಟ್ಟೆಗಳಲ್ಲಿ 31,105 ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಂಡಿದ್ದು, ಇಂದಿನವರೆಗೆ 1,83,323 ಆಹಾರ ಪೊಟ್ಟಣ, 32,881 ದಿನಸಿಕಿಟ್, 42,526 ಔಷಧಿ ಕಿಟ್, ಮಾಸ್ಕ್, ಹಾಗೂ ಸಮಸ್ಯೆಯಲ್ಲಿರುವ ಹಲವಾರು ವ್ಯಕ್ತಿಗಳನ್ನು ಖುದ್ದಾಗಿ ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. 25,000ಕ್ಕಿಂತ ಅಧಿಕ ಕಾರ್ಯಕರ್ತರು ಪ್ರಧಾನಮಂತ್ರಿಯವರ ಪಿ.ಎಂ. ಕೇರ್ಸ್‌ ಖಾತೆಗೆ ಈಗಾಗಲೇ ದೇಣಿಗೆಯನ್ನು ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News