×
Ad

ಮಂಗಳೂ: ಗೃಹರಕ್ಷಕರಿಗೆ ಅಕ್ಕಿ ವಿತರಣೆ

Update: 2020-04-20 21:20 IST

ಮಂಗಳೂರು, ಎ.20: ನಗರದ ಮೇರಿಹಿಲ್‌ನಲ್ಲಿರುವ ದ.ಕ.ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಮಂಗಳೂರು ಘಟಕದ ಗೃಹರಕ್ಷಕರಿಗೆ ಅಕ್ಕಿ ವಿತರಣೆ ಕಾರ್ಯಕ್ರಮ ಸೋಮವಾರು ಜರುಗಿತು.

ಕೊರೋನ ರೋಗದಿಂದಾಗಿ ಜಿಲ್ಲೆಯು ಸಾಕಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗಿ, ಜನಸಾಮಾನ್ಯರಿಗೆ ಬಹಳಷ್ಟು ತೊಂದರೆ ಉಂಟಾಗಿರು ವುದನ್ನು ಮನಗಂಡು ಗೃಹರಕ್ಷಕರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಅಕ್ಕಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಸಂಪುಟ ಕಾಯದರ್ಶಿ ವಿಜಯ ವಿಷ್ಣು ಮಯ್ಯ, ಲಯನ್ಸ್‌ನ ಜಿಲ್ಲಾ ದ್ವಿತೀಯ ಉಪರಾಜ್ಯಪಾಲ ವಸಂತ ಶೆಟ್ಟಿ ಮತ್ತು ಜೆಸಿಐ ಮಂಗಳೂರು ಇದರ ಮಹೇಶ್ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲಿ ಮೋಹನ ಚೂಂತಾರು 100 ಗೃಹರಕ್ಷಕರಿಗೆ ತಲಾ 5 ಕೆ.ಜಿ.ಯಂತೆ ಅಕ್ಕಿಯನ್ನು ವಿತರಿಸಿದರು.

ಈ ಸಂದರ್ಭ ದ.ಕ. ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಟ ರಮೇಶ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News