×
Ad

​ಕಾರ್ಕಳ ಕ್ಷೇತ್ರಕ್ಕೆ 1200 ಆಹಾರ ಸಾಮಗ್ರಿ ಕಿಟ್ ವಿತರಣೆ

Update: 2020-04-20 21:50 IST

ಉಡುಪಿ, ಎ.20: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 1200 ಆಹಾರ ಸಾಮಗ್ರಿ ಕಿಟ್ಗಳನ್ನು ಸೋಮವಾರ ಮಂದರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೀಡ ಲಾಯಿತು.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೀಡಲು ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಹಶಿಲ್ದಾರರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ 1200 ಆಹಾರ ಸಾಮಾಗ್ರಿ ಕಿಟ್ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಳದ ಮುಕ್ತೆಸರ ಧನಂಜಯ ಶೆಟ್ಟ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News