ಝಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ಕೆ.ಜಿ. ಬೋಪಯ್ಯ ಒತ್ತಾಯ
Update: 2020-04-20 23:26 IST
ಮಡಿಕೇರಿ, ಏ.20 : ಬೆಂಗಳೂರಿನ ಪಾದರಾಯನಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಝಮೀರ್ ಅಹ್ಮದ್ ಅವರು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಶಾಸಕ ಝಮೀರ್ ಅವರ ವಿರುದ್ಧ ಮೊದಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು ಗಲಭೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು.