×
Ad

ಕೊರೋನ : ದ.ಕ. ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಪಾಸಿಟಿವ್‌

Update: 2020-04-21 12:54 IST
ಸಾಂದರ್ಭಿಕ ಚಿತ್ರ

ಬಂಟ್ವಾಳ, ಎ.21: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷ ಪ್ರಾಯದ ವೃದ್ಧೆಯೊಬ್ಬರಿಗೆ ಕೋವಿಡ್ - 19 (ಕೊರೋನ) ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಬೆಳಗ್ಗೆ ಬುಲೆಟಿನ್ ಬಿಡುಗಡೆ ಮಾಡಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ವೃದ್ಧೆಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.

ಈ ಮಹಿಳೆ ಕೊರೋನ ವೈರಸ್ ಸೋಂಕಿನಿಂದ ರವಿವಾರ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ನೆರೆ ಮನೆಯ ಮಹಿಳೆ ಎಂದು ತಿಳಿದು ಬಂದಿದೆ. 

ಮೃತ ಮಹಿಳೆಯ ಸಂಪರ್ಕದಿಂದ ಇವರಿಗೂ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯನ್ನು ಎ.18ರಂದು ಮಂಗಳೂರು ಕೋವಿಡ್ - 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ - 19 ಪರೀಕ್ಷೆಗೆ ಕಳುಹಿಸಿದ್ದ ವೃದ್ಧೆಯ ಗಂಟಲ ದ್ರವ ಮಾದರಿಯ ವರದಿ ಇಂದು ಬಂದಿದ್ದು ಅದರಲ್ಲಿ ಪಾಸಿಟಿವ್ ಆಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News