×
Ad

ರಾಜ್ಯದಲ್ಲಿ ಇಂದು 10 ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ

Update: 2020-04-21 19:05 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.21: ಕೊರೋನದಿಂದ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಮಂಗಳವಾರ 10 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯ ನಿವಾಸಿಯಾದ 80 ವರ್ಷದ ಪುರುಷರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಪಾರ್ಕಿನ್ ಸನ್ಸ್ ಕಾಯಿಲೆಯಿಂದ ಬಳಲುತ್ತಿದ್ದರು.  ಎ.19 ರಂದು ತೀವ್ರ ಉಸಿರಾಟದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಮಂಗಳವಾರ ಮೃತಪಟ್ಟಿದ್ದಾರೆ.

ಕೊರೋನ ಸೋಂಕಿತರಲ್ಲಿ 129 ಜನರುಗುಣಮುಖರಾಗಿದ್ದರೆ, 17 ಮಂದಿ ಮೃತಪಟ್ಟಿದ್ದು, ಉಳಿದ 272 ಸಕ್ರಿಯ ಪ್ರಕರಣಗಳ ಪೈಕಿ 267 ರೋಗಿಗಳು ನಿಗದಿತ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವು ಸ್ಥಿರವಾಗಿರುತ್ತದೆ. ಉಳಿದ ಐವರನ್ನು ಐಸಿಯುನಲ್ಲಿಡಲಾಗಿದೆ.

ಸೋಂಕಿತರ ವಿವರ:

ರೋಗಿ 409: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 67 ವರ್ಷದ ಮಹಿಳೆಯಾಗಿದ್ದು, ತೀವ್ರ ಉಸಿರಾಟದ ತೊಂದರೆಯನ್ನು ಅನುಭವಿಸಿದ್ದರು.
ರೋಗಿ 410: ವಿಜಯಪುರ ಜಿಲ್ಲೆಯ 18 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 306 ಸಂಪರ್ಕಿತರಾಗಿದ್ದಾರೆ.
ರೋಗಿ 411: ವಿಜಯಪುರ ಜಿಲ್ಲೆಯ 30 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 306 ಸಂಪರ್ಕಿತರಾಗಿದ್ದಾರೆ.
ರೋಗಿ 412: ವಿಜಯಪುರ ಜಿಲ್ಲೆಯ 29 ವರ್ಷದ ಪುರುಷರಾಗಿದ್ದು, ಐಎಲ್‍ಐ ಹಿನ್ನೆಲೆಯುಳ್ಳವರಾಗಿದ್ದಾರೆ.
ರೋಗಿ 413: ವಿಜಯಪುರ ಜಿಲ್ಲೆಯ 61 ವರ್ಷದ ಪುರುಷರಾಗಿದ್ದು, ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ರೋಗಿ 414: ವಿಜಯಪುರ ಜಿಲ್ಲೆಯ 80 ವರ್ಷದ ಪುರುಷರಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.
ರೋಗಿ 415: ವಿಜಯಪುರ ಜಿಲ್ಲೆಯ 18 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದರೋಗಿ 306 ಸಂಪರ್ಕಿತರಾಗಿದ್ದಾರೆ.
ರೋಗಿ 416: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ 26 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 52 ರ ದ್ವಿತೀಯ ಸಂಪರ್ಕಿತರಾಗಿದ್ದಾರೆ.
ರೋಗಿ 417: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ 26 ವರ್ಷದ ಪುರುಷರಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 52 ರ ದ್ವಿತೀಯ ಸಂಪರ್ಕಿತರಾಗಿದ್ದಾರೆ.
ರೋಗಿ 418: ಬೆಳಗಾವಿ ಜಿಲ್ಲೆಯ 25 ವರ್ಷದ ಮಹಿಳೆಯಾಗಿದ್ದು, ಈ ಹಿಂದೆ ಸೋಂಕು ದೃಢಪಟ್ಟಿದ್ದ ರೋಗಿ 293 ಸಂಪರ್ಕಿತರಾಗಿದ್ದಾರೆ.

ಸಚಿವಾಲಯ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ, ನಾಗರೀಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ರಾಜ್ಯದಲ್ಲಿರುವ ಎಲ್ಲ ಖಜಾನೆಗಳನ್ನು ಸೇರಿದಂತೆ ಆರ್ಥಿಕ ಇಲಾಖೆ, ಪಶು ಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕೆ ಇಲಾಖೆಗೆಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲ ವರ್ಗದಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲು ನಿರ್ದೇಶಿಸಲಾಗಿದೆ.

ಈ ಆದೇಶವು ಎ.20 ರಿಂದ ಮೇ 3 ರವರೆಗೂ ಅನ್ವಯಿಸಲಿದ್ದು, ಉಳಿದ ಇಲಾಖೆಗಳಲ್ಲಿನ ಶೇ.33 ರಷ್ಟು ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ರಾಜ್ಯದ ಖಾಸಗಿ ಆರೋಗ್ಯ ಕೇಂದ್ರಗಳ ಅಡಿಯಲ್ಲಿನಜ್ವರ ಕ್ಲಿನಿಕ್‍ಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಬಳಿ ಕೆಪಿಎಂಎ ಕಾಯ್ದೆ 2007 ರಡಿ ನೋಂದಾಯಿಸಿಕೊಳ್ಳಲು ನಿರ್ದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News