ಪತ್ರಕರ್ತರಿಗೆ ಮಾಸ್ಕ್ ವಿತರಣೆ
ಮಂಗಳೂರು, ಎ.21: ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷಾ ಅವರ ಸೂಚನೆಯಂತೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ವರದಿಗಾರರಿಗೆ ಮತ್ತು ಛಾಯಾಗ್ರಾಹಕರಿಗೆ ಮಾಸ್ಕ್ (ಮುಖ ರಕ್ಷಾ ಕವಚ) ವಿತರಣೆಯು ಮಂಗಳವಾರ ಉರ್ವ ಠಾಣೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಡಾ.ಪಿ.ಎಸ್. ಹರ್ಷಾ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗೆ ಈಗಾಗಲೇ ಮಾಸ್ಕ್ ವಿತರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕರ್ತವ್ಯನಿರತ 50ಕ್ಕೂ ಅಧಿಕ ಪತ್ರಕರ್ತರಿಗೆ ಕೊರೋನ ಸೋಂಕು ದೃಢಪಟ್ಟಿದೆ. ನಗರದಲ್ಲೂ ಪತ್ರಕರ್ತರು ನಿರಂತರ ಓಡಾಟದಲ್ಲಿದ್ದು, ಅವರ ಸುರಕ್ಷತೆಯ ಬಗ್ಗೆ ಎಚ್ಚರವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ವಿತರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಿಸರ್ವ್ ಸೆಕ್ಟುರಿಟಿ ಇನ್‌ಸ್ಪೆಕ್ಟರ್ ಅನ್ನು ಎಂ.ಎಸ್., ಪೊಲೀಸ್ ಇನ್‌ಸ್ಪೆಕ್ಟರ್ ಮುಹಮ್ಮದ್ ಶರ್ೀ, ರಂಗೇಗೌಡ, ಸಬ್ ಇನ್‌ಸ್ಪೆಕ್ಟರ್‌ಗಳಾದ ಶ್ರೀಕಲಾ, ದೇಜಪ್ಪ ಮತ್ತಿತರರು ಉಪಸ್ಥಿತರಿದ್ದರು.