ಅಕ್ರಮ ಮದ್ಯ ಮಾರಾಟ: ಮೂವರು ಆರೋಪಿಗಳ ಬಂಧನ
Update: 2020-04-21 22:56 IST
ಬೆಂಗಳೂರು, ಎ.21: ಲಾಕ್‍ಡೌನ್ ನಡುವೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮದ್ಯದಂಗಡಿ ಮೇಲೆ ದಾಳಿ ನಡೆಸಿ ಮೂವರನ್ನು ಬಂದಿಸುವಲ್ಲಿ ರಾಜಾನುಗುಂಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಕೋಳು ಗ್ರಾಮದ ಬಳಿಯ ರಚನಾ ಮದ್ಯದಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಜಾನುಕುಂಟೆ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.