×
Ad

ಭಾರತ್ ಸ್ಕೌಟ್ಸ್, ಗೈಡ್ಸ್ ಮಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

Update: 2020-04-22 00:02 IST

ಮಂಗಳೂರು : ಕೋವಿಡ್ 19 ಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಸ್ಥಳೀಯ ಸಂಸ್ಥೆಯಿಂದ- ರೂ.15,000  ಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಸಂತ ರಾವ್ ಅವರು ಜಿಲ್ಲಾಧಿಕಾರಿ ಅವರಿಗೆ  ಹಸ್ತಾಂತರಿಸಿದರು.

ಈ ಸಂದರ್ಭ ಮಂಗಳೂರು ದಕ್ಷಿಣ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ನಾರಾಯಣ್ ಶೇರಿಗಾರ್ ಹಾಗೂ ಮಂಗಳೂರು ಉತ್ತರ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಗೈಡ್ ತರಬೇತು ಆಯುಕ್ತರಾದ  ಜಯಶ್ರೀ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News