ಮಂಗಳೂರು: ಕೊರೋನ ವಾರಿಯರ್ಸ್‌ಗೆ ಗೌರವಾರ್ಪಣೆ

Update: 2020-04-22 08:46 GMT

ಮಂಗಳೂರು, ಎ.22: ಕೋವಿಡ್ ನಿಯಂತ್ರಣದಲ್ಲಿ ತೊಡಗಿರುವ ವೈದ್ಯರು, ಸಿಬ್ಬಂದಿಯನ್ನು ಗೌರವಿಸುವ ‘ಸೆಲ್ಯೂಟಿಂಗ್ ದಿ ವಾರಿಯರ್ಸ್‌’ ಕಾರ್ಯಕ್ರಮ ಇಂದು ಬೆಳಗ್ಗೆ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಬ್ಲಾಕ್ ನಲ್ಲಿ ನಡೆಯಿತು.

 ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಡಾ.ಪಿ.ಎಸ್.ಹರ್ಷ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಸುರಕ್ಷಿತ ಅಂತರ ಕಾಯ್ದುಕೊಂಡು ಆಸ್ಪತ್ರೆಯೆದುರು ನಿಂತಿದ್ದ ಕೋವಿಡ್- 19 ವಾರಿಯರ್ಸ್‌ಗೆ 25 ಪೊಲೀಸ್ ಬೆಂಗಾವಲು ವಾಹನಗಳ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಪಂ ಸಿಇಒ ಸೆಲ್ವಮಣಿ, ಡಿಎಚ್‌ಒ ಡಾ.ರಾಮಚಂದ್ರ ಬಾಯರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಮಾಲಾಡಿ, ಉಪ ಆಯುಕ್ತ ಡಾ.ಸಂತೋಷ್ ಕುಮಾರ್, ಡಿಸಿಪಿ ಅರುಣಾಂಶು, ಐಎಂಎ ದ.ಕ. ಜಿಲ್ಲಾ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News