ಆಪ್ತಮಿತ್ರ ಮೊಬೈಲ್ ಆ್ಯಪ್, ಸಹಾಯವಾಣಿಗೆ ಸಿಎಂ ಚಾಲನೆ
Update: 2020-04-22 12:45 IST
ಬೆಂಗಳೂರು, ಎ.22: ಆಪ್ತಮಿತ್ರ ಮೊಬೈಲ್ ಆ್ಯಪ್ ಹಾಗೂ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಬಿ.ಎಂ.ಆರ್.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ.ಮಣಿವಣ್ಣನ್ ಮತ್ತಿತರರು ಉಪಸ್ಥಿತರಿದ್ದರು.