ಕೊರೋನ ವಾರಿಯರ್ಸ್ ಗಳ ಮೇಲೆ ಕೈ ಮಾಡಿದರೆ ಗೂಂಡಾ ಕೇಸ್: ಸಚಿವ ಕೋಟ ಎಚ್ಚರಿಕೆ

Update: 2020-04-22 08:13 GMT

ಮಂಗಳೂರು, ಎ.22: ಕೊರೋನ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರನ್ನು ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ. ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನೀಡಲಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆಗೆ ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸಾಂಕೇತಿವಾಗಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಕೊರೋನಾ ವಾರಿಯರ್ಸ್ ಗಳ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

 ಪೊಲೀಸರಿಗೆ ಲಾಠಿ ರಿವಾಲ್ವರ್ ಕೊಟ್ಟಿರುವುದು, ಪ್ರದರ್ಶನಕ್ಕೆ ಅಲ್ಲ, ಜೀವ‌ರಕ್ಷಣೆಗಾಗಿ ಆದರೆ ಅವರ ಮೇಲೆಯೇ ಹಲ್ಲೆ ನಡೆಯುವುದನ್ನು ಸಹಿಸಲಾಗದು ಎಂದರು.

ಜನರಿಗೆ ಮುಜರಾಯಿ ಇಲಾಖೆಯ ವತಿಯಿಂದ ಪ್ರತೀ ದೇವಸ್ಥಾನಗಳಲ್ಲೂ ಆಹಾರ ವಿತರಿಸಲಾಗುತ್ತಿದೆ. ಕೊರೋನ ನಿಯಂತ್ರಣಕ್ಕಾಗಿ ಎಲ್ಲರ ಸಹಕಾರ ಅಗತ್ಯ. ಕೊರೋನ ತಪಾಸಣೆಗೆ ಹೋದವರ ಮೇಲೆ ಹಲ್ಲೆಗೆ ಯಾರಾದರೂ ಮುಂದಾದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ‌ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್‌ರಾಜೇಂದ್ರ ಕುಮಾರ್ ಮಾತನಾಡಿ, ಯಾವುದೇ ಸಂದರ್ಭದಲ್ಲಿ ಅಗತ್ಯ ನೆರವು ನೀಡಲು ಸಿದ್ಧ ಎಂದರು.

ಶಾಸಕರಾದ ವೇದವ್ಯಾಸ ಕಾಮತ್. ಡಾ.ಭರತ್ ಶೆಟ್ಟಿ ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News