ಮೇ 3ರ ಲಾಕ್ ಡೌನ್ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ: ಸುರೇಶ್ ಕುಮಾರ್
ತುಮಕೂರು, ಎ.22: ಮೇ 3ರ ಲಾಕ್ ಡೌನ್ ಮುಗಿದ ನಂತರ ವಿದ್ಯಾರ್ಥಿಗಳಿಗೆ ಸಮಯ ನೀಡಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಮಕ್ಕಳೊಂದಿಗೆ ಮಾತುಕತೆ ನಡೆಸಿದ ಅವರು, ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆ ನಡೆಸುವ ಮೊದಲು ಪುನರ್ ಮನನ ತರಗತಿಗಳನ್ನು ಮಾಡಲಾಗುವುದು, ಜೊತೆಗೆ ದೂರದರ್ಶನದಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಪಾಠ ನಡೆಸಲು ತೀರ್ಮಾನ ಮಾಡಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಂದ ಯಾರು ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.
ಅಲ್ಲದೆ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಿಸುವ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ, ಈಗಾಗ್ಲೇ ಕೇಂದ್ರ ಸರಕಾರ ಇದಕ್ಕೆ ಸೂಚನೆಗಳನ್ನು ನೀಡಿದೆ. ಮುಂದಿನ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ಜೊತೆಗೆ ಶಾಲೆಗಳ ಪ್ರವೇಶ ಶುಲ್ಕ ತೆಗೆದುಕೊಳ್ಳಬಾರದು ಎಂದು ಕೆಲ ರಾಜ್ಯಗಳು ಆದೇಶ ಹೊರಡಿಸಿವೆ. ಆ ವಿಚಾರದ ಬಗ್ಗೆಯೂ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೊರೋನ ತಡೆಗೆ ಸುಗ್ರೀವಾಜ್ಞೆ
ಕೊರೋನ ವೈರಸ್ ಹರಡುವುದನ್ನು ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಕುರಿತು ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿದೆ. ಕೇರಳ, ಉತ್ತರ ಪ್ರದೇಶದಲ್ಲಿ ಹೊರಡಿಸಿರುವ ಸುಗ್ರೀವಾಜ್ಞೆ ಗಳನ್ನು ಗಮನಿಸಲಾಗಿದೆ. ಕೊರೋನ ಸೋಂಕು ಹರಡುವವರ ವಿರುದ್ಧ ಹಾಗೂ ಕೊರೋನ ವಾರಿರ್ಯಸ್‍ಗಳಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲುವ ಕ್ರಮಗಳನ್ನು ಸುಗ್ರೀವಾಜ್ಞೆ ವ್ಯಾಪ್ತಿಯಲ್ಲಿ ಸೇರಿಸಲಾಗವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.