ದೂರದರ್ಶನದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಗತಿ: ಸಚಿವ ಸುರೇಶ್ ಕುಮಾರ್

Update: 2020-04-22 12:08 GMT

ಬೆಂಗಳೂರು, ಎ.22: ಕೊರೋನದಿಂದಾಗಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಎ.29ರಿಂದ ಪುನರ್ ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ತರಗತಿಗಳು ಎ.29ರಿಂದ ಪ್ರತಿ ದಿನ ಮಧ್ಯಾಹ್ನ 3 ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೆ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

18ನೆ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನು ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸುರೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News