×
Ad

ರಾಜ್ಯದಲ್ಲಿ 427ಕ್ಕೆ ಏರಿದ ಕೊರೋನ ಸೋಂಕಿತರ ಸಂಖ್ಯೆ

Update: 2020-04-22 17:55 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.22: ರಾಜ್ಯದಲ್ಲಿ ನಾಲ್ಕು ತಿಂಗಳ ಮಗುವೊಂದರ ಸಹಿತ ಮತ್ತೆ 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 427ಕ್ಕೆ ಏರಿದೆ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆವರೆಗೆ ಒಟ್ಟು 9 ಕೊರೋನ ಪಾಸಿಟಿವ್ ಪತ್ತೆಯಾಗಿವೆ. ಈ ಪೈಕಿ ಐದು ಪ್ರಕರಣಗಳು ಕಲಬುರಗಿ ಜಿಲ್ಲೆಯಲ್ಲಿ, ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿ ಹಾಗೂ ಮೈಸೂರಿನಲ್ಲಿ ಎರಡು ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 427ಕ್ಕೇರಿದೆ. ಈ ಪೈಕಿ ಹದಿನೇಳು ಮಂದಿ ಮೃತಪಟ್ಟಿದ್ದರೆ, 131 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಬುಲೆಟಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News