6 ವರ್ಷದ ಬಾಲಕಿಯ ಅತ್ಯಾಚಾರಗೈದು, ಕಣ್ಣುಗಳನ್ನು ಕಿತ್ತು ಹಾಕಿದ ದುಷ್ಕರ್ಮಿ

Update: 2020-04-23 12:04 GMT

ದಾಮೋಹ್ (ಮಧ್ಯಪ್ರದೇಶ): ಆರು ವರ್ಷ ಪ್ರಾಯದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು , ಆಕೆಯ ಕಣ್ಣುಗಳನ್ನು ಕಿತ್ತುಹಾಕಿರುವ ಘಟನೆ ಮಧ್ಯಪ್ರದೇಶದ ದಾಮೋಹ್ ನಲ್ಲಿ ನಡೆದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಬಾಲಕಿ ತನ್ನ ಗೆಳೆಯರ ಜೊತೆ ಆಟವಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಯನ್ನು ಎಳೆದೊಯ್ದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆನಂತರ ಬಾಲಕಿ ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಪತ್ತೆಯಾಗಿದ್ದಳು.

“ಆಕೆಯ ಮೇಲೆ ಅತ್ಯಾಚಾರ ನಡೆದಿದ್ದು, ಕಣ್ಣುಗಳಿಗೆ ಗಂಭೀರ ಗಾಯಗಳಾಗಿವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News