×
Ad

ಬೆಂಗಳೂರು: ಎರಡು ತಲೆ ಹಾವು ಮಾರಾಟಗಾರರ ಬಂಧನ

Update: 2020-04-23 23:13 IST

ಬೆಂಗಳೂರು, ಎ.23: ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯಯುಳ್ಳ  ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಡಂಜೋ ಸಂಸ್ಥೆಯ ಸಿಬ್ಬಂದಿ ಆಗಿರುವ ಗುರಪ್ಪನಪಾಳ್ಯ ನಿವಾಸಿ ರಿಝ್ವಾನ್, ಅಝರ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಲಾಕ್‍ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಎರಡು ತಲೆ ಹಾವು ಮಾರಾಟಕ್ಕೆ ಆರೋಪಿಗಳು ಮುಂದಾಗಿದ್ದು, ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಎರಡು ತಲೆ ಹಾವಿಗೆ 50ರಿಂದ 60 ಲಕ್ಷ ರೂ. ಬೆಲೆ ಇದೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರ ವಿರುದ್ಧ ಕಗ್ಗಲಿಪುರದ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News