ಲಾಕ್‍ಡೌನ್ ಸಂಕಷ್ಟದಲ್ಲಿ ಕಲಾವಿದರು: ರಾಜ್ಯದ ವಿವಿಧ ಅಕಾಡಮಿಗಳಿಂದ ಅರ್ಜಿ ಅಹ್ವಾನ

Update: 2020-04-24 12:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.24: ಕೊರೋನ ಲಾಕ್‍ಡೌನ್ ಹಿನ್ನೆಲೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಯಕ್ಷಗಾನ ಅಕಾಡಮಿ ಆರ್ಥಿಕ ಸಹಾಯ ಮಾಡಲು ಮುಂದಾಗಿದೆ.

ಪಡುವಲಪಾಯ ಯಕ್ಷಗಾನ(ಕರಾವಳಿ)ದ ತೆಂಕುತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟು, ಯಕ್ಷಗಾನ ಬೊಂಬೆಯಾಟದ ಕಲಾವಿದರು ಹಾಗೂ ಮೂಲಕಪಾಯ ಯಕ್ಷಗಾನ, ಘಟ್ಟದಕೊರೆ ಕೇಳಿಕೆ ಪ್ರಕಾರದ ಕಲಾವಿದರು ತಮ್ಮ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ, ಇತ್ಯಾದಿ ಮಾಹಿತಿಯನ್ನು ಕರ್ನಾಟಕ ಯಕ್ಷಗಾನ ಅಕಾಡಮಿಯ ಜಾಲತಾಣ kybabangalore@gmail.com ಅಥವಾ ಅಕಾಡಮಿ ಅಧ್ಯಕ್ಷರ ಮೊಬೈಲ್ ಸಂಖ್ಯೆ 9901141090 ಹಾಗೂ ರಿಜಿಸ್ಟ್ರಾರ್ ಮೊಬೈಲ್ ಸಂಖ್ಯೆಗಳಿಗೆ ವಾಟ್ಸ್ ಆ್ಯಪ್ ಮೂಲಕ  ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಚೇರಿಗಳಿಗೆ ಎ.27 ರ ಒಳಗೆ ವಿವರಗಳನ್ನು ಸಲ್ಲಿಸುವಂತೆ ಅಕಾಡಮಿಯ ಪ್ರಕಟನೆ ತಿಳಿಸಿದೆ.

ನೃತ್ಯ ಅಕಾಡಮಿ

ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಸಂಗೀತ ಕಲಾವಿದರಿಗೆ ಆರ್ಥಿಕ ನೆರವು ನೀಡಲು ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯು ನಿರ್ಧರಿಸಿದೆ.

ಆಸಕ್ತ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಪ್ರಕಾರದ ಕಲಾವಿದರು ತಮ್ಮ ಹೆಸರು ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಹೆಸರು, ವಿಳಾಸ ಖಾತೆ ಸಂಖ್ಯೆ ಇವುಗಳ ಜೆರಾಕ್ಸ್ ಪ್ರತಿ ಹಾಗೂ ಅರ್ಜಿಯನ್ನು ಅಗತ್ಯ ದಾಖಲೆಯೊಂದಿಗೆ ಅಕಾಡಮಿಯ ಜಾಲತಾಣ karnatakasangeeta@academy@gmail.com  ಅಥವಾ   7975949840, 7975949840 ಸಂಖ್ಯೆಗೆ ಎ.27 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ 080-22215072 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ. 

ಲಲಿತ ಕಲಾ ಅಕಾಡಮಿ

ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಕರ್ನಾಟಕ ಲಲಿತ ಕಲಾ ಅಕಾಡಮಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.

ಆಸಕ್ತ ಕಲಾವಿದರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳನ್ನು ಎ.28ರೊಳಗೆ ಅಕಾಡಮಿಯ ಜಾಲತಾಣ kla.karnataka@gmail.com ಅಥವಾ ಅಧ್ಯಕ್ಷರು, ಸದಸ್ಯರ ದೂರವಾಣಿಗೆ ವಾಟ್ಸ್ ಆ್ಯಪ್ ಮೂಲಕ ಟೈಪ್ ಮಾಡಿ ಕಳುಹಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಶಿಲ್ಪ ಕಲಾ ಅಕಾಡಮಿ

ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರಕಾರದ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಶಿಲ್ಪ ಕಲಾವಿದರಿಗೆ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಿದ್ದು ಆಸಕ್ತ ಶಿಲ್ಪ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಶಿಲ್ಪ ಕಲಾವಿದರು ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಶಿಲ್ಪಕಲಾ ಅಕಾಡಮಿ, ಬೆಂಗಳೂರು. ಇಲ್ಲಿಗೆ ಎ.27ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಜಾಲತಾಣ shilpakala.academy@gmail.com ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News