ಶಾಸಕ ಭರತ್ ಶೆಟ್ಟಿ ನಡವಳಿಕೆ ಕಾನೂನು ಬಾಹಿರ, ಅಮಾನವೀಯ: ಮಾಜಿ ಸಿಎಂ ಸಿದ್ದರಾಮಯ್ಯ

Update: 2020-04-24 16:57 GMT
ಸಿದ್ದರಾಮಯ್ಯ- ಶಾಸಕ ಭರತ್ ಶೆಟ್ಟಿ

ಬೆಂಗಳೂರು, ಎ.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನು ಬಾಹಿರ ಮಾತ್ರವಲ್ಲ, ಅಮಾನವೀಯವಾದುದು ಕೂಡ. ಈ ಶಾಸಕರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪನವರು ತಕ್ಷಣ ಕ್ರಮ ಕೈಗೊಂಡು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕೊರೋನ ಸೋಂಕಿತರ ಚಿಕಿತ್ಸೆ ಮತ್ತು ಅಂತ್ಯ ಸಂಸ್ಕಾರದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಹೊಸ ಕಾನೂನು‌‌ ಜಾರಿಗೊಳಿಸಿದೆ. ಯಡಿಯೂರಪ್ಪ ಅವರು ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಈ ಕಾನೂನಿನಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News