ವಿವಿಧ ಹುದ್ದೆಗಳ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಮುಂದೂಡಿದ ಕೆಪಿಎಸ್‍ಸಿ

Update: 2020-04-24 17:53 GMT

ಬೆಂಗಳೂರು, ಎ.24: ರಾಜ್ಯ ಸರಕಾರದ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಮೇ, ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ ಎಲ್ಲ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಇ) ಮುಂದೂಡಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ, ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 106 ಹುದ್ದೆಗಳು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ 'ಎ' ವೃಂದ 54 ಹುದ್ದೆಗಳು ಮತ್ತು ವಿವಿಧ ಇಲಾಖೆಗಳ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಹೊರಡಿಸಲಾದ ಅಧಿಸೂಚನೆಯಲ್ಲಿರುವ ಪರೀಕ್ಷಾ ದಿನವನ್ನು ಮುಂದೂಡಲಾಗಿದೆ.

'ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಲಾಕ್‍ಡೌನ್ ಅವಧಿ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುವುದು' ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News