ಕೊರೋನ: ರಾಜ್ಯದಲ್ಲಿ ಹೊಸದಾಗಿ 15 ಮಂದಿಯಲ್ಲಿ ಸೋಂಕು ದೃಢ
Update: 2020-04-25 12:36 IST
ಬೆಂಗಳೂರು, ಎ.25: ರಾಜ್ಯದಲ್ಲಿ ಇಂದು 15 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 489ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ರವಿವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ 15 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಿದೆ. ಈ ಪೈಕಿ ಬೆಂಗಳೂರು ನಗರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ತಲಾ ಆರು ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ, ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಬೆಳಕಿಗೆ ಬಂದಿದೆ.