×
Ad

ಉಡುಪಿ : ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

Update: 2020-04-25 18:06 IST

ಉಡುಪಿ, ಎ.25: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು, ನವೋದಯ ಸ್ವ ಸಹಾಯ ಸಂಘಗಳ ಪ್ರೇರಕರು ಹಾಗೂ ಪತ್ರಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮವು ಶನಿವಾರ ಅಜ್ಜಕಾಡು ಪುರಭವನದಲ್ಲಿ ಜರಗಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಮಾತನಾಡಿ, ಸದ್ಯದಲ್ಲೇ ಉಡುಪಿ ಜಿಲ್ಲೆ ಹಸಿರು ವಲಯಕ್ಕೆ ಸೇರ್ಪಡೆ ಯಾಗಲಿದೆ. ಜಿಲ್ಲೆಯನ್ನು ಸಂಪೂರ್ಣವಾಗಿ ಕೊರೋನ ಮುಕ್ತವನ್ನಾಗಿಸಲು ಪ್ರತಿ ಯೊಬ್ಬರು ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಬೇಕು. ಇದರಲ್ಲಿ ಪ್ರತಿ ಯೊಬ್ಬರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ಇಂದು ಲಾಕ್‌ಡೌನ್‌ನಿಂದಾಗಿ ಜನಜೀವನ ಮಟ್ಟ ತೀವ್ರವಾಗಿ ಕುಸಿದಿದೆ. ಆದರೂ ಜನ ಧೈರ್ಯ ಕಳೆದುಕೊಳ್ಳದೆ ಈ ಕೊರೋನ ವೈರಾಣು ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಈ ಮೂಲಕ ಜಿಲ್ಲೆ, ರಾಜ್ಯ ಹಾಗೂ ಇಡೀ ದೇಶವನ್ನು ಕೊರೋನ ಮುಕ್ತವನ್ನಾಗಿಸಬೇಕು ಎಂದು ಅವರು ತಿಳಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಕೊರೋನ ವೈರಸ್ ಭೀತಿಯಿಂದ ಎಲ್ಲ ವರ್ಗದ ಜನತೆ ತತ್ತರಿಸಿ ಹೋಗಿದ್ದಾರೆ. ಜಗತ್ತಿನ ಆರ್ಥಿಕ ಪರಿಸ್ಥಿತಿ ತೀರಾ ಕೆಳಮಟ್ಟಕ್ಕೆ ಕುಸಿದಿದೆ. ಆದು ದರಿಂದ ಮುಂದಿನ ದಿನಗಳು ಬಹಳಷ್ಟು ಕಷ್ಟಕರವಾಗಲಿದೆ. ಇದನ್ನು ಎದುರಿ ಸಲು ನಾವೆಲ್ಲ ಜ್ಜಾಗಬೇಕಾಗಿದೆ ಎಂದು ಹೇಳಿದರು.

ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕಾಪು ದಿವಾಕರ ಶೆಟ್ಟಿ, ರಾಜೇಶ್ ರಾವ್, ಸುಧೀರ್ ವೈ., ಮೈರ್ಮಾಡಿ ಅಶೋಕ್ ಶೆಟ್ಟಿ, ಅಶೋಕ್ ಶೆಟ್ಟಿ, ಇಂದು ಶೇಖರ್, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸಾ್ವಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News