×
Ad

ಮಹೇಂದ್ರ ಕುಮಾರ್ ನಿಧನಕ್ಕೆ ದಸಂಸ ಮುಖಂಡ ಮಾವಳ್ಳಿ ಶಂಕರ್ ಸಂತಾಪ

Update: 2020-04-25 18:07 IST
ಮಹೇಂದ್ರ ಕುಮಾರ್

ಬೆಂಗಳೂರು, ಎ.25: ಪ್ರಗತಿಪರ ಚಿಂತಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನಕ್ಕೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಸಂತಾಪ ಸಲ್ಲಿಸಿದ್ದಾರೆ.

ಭಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಸಂಘಟನೆಯನ್ನು ತೊರೆದು, ಸೌಹಾರ್ದ ಕರ್ನಾಟಕ ಹಾಗೂ ಸೌಹಾರ್ದ ಭಾರತ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಇತ್ತೀಚಿಗೆ ಕೇಂದ್ರ ಸರಕಾರ ಜಾರಿ ಮಾಡಲು ಮುಂದಾಗಿದ್ದ ಸಿಎಎ(ಪೌರತ್ವ ತಿದ್ದುಪಡಿ ಕಾಯ್ದೆ) ವಿರುದ್ಧ ಜನರಲ್ಲಿ ಅರಿವನ್ನು ಮೂಡಿಸುವಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

ಅವರ ಅಗಲಿಕೆ ಜನಪರ ಚಳವಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬದ ಸದಸ್ಯರು, ಅವರ ಅಪಾರ ಅಭಿಮಾನಿಗಳಿಗೆ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಅವರ ತತ್ವ, ಸಿದ್ಧಾಂತ ಮತ್ತು ಆದರ್ಶಗಳನ್ನು ಜನಸಮುದಾಯದೆಡೆಗೆ ಕೊಂಡೊಯ್ಯುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಪತ್ರಿಕಾ ಪ್ರಕಟನೆಯ ಮೂಲಕ ಸಂತಾಪ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News