ಆರೋಗ್ಯ ತಪಾಸಣೆ ವೇಳೆ ಲೋಪ: ಕಡ್ಡಾಯ ರಜೆ
Update: 2020-04-25 20:31 IST
ಮಂಗಳೂರು, ಎ.25: ಬಂಟ್ವಾಳ ಪುರಸಭೆಯ ಪೌರಕಾರ್ಮಿಕರ ಆರೋಗ್ಯ ತಪಾಸಣೆ ವೇಳೆ ಉಂಟಾಗಿರುವ ಗೊಂದಲ ಮತ್ತು ಮೇಲ್ನೋಟಕ್ಕೆ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪುರಸಭೆಯ ಪರಿಸರ ಅಭಿಯಂತರರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ.
ಉಳ್ಳಾಲ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರನ್ನು ಬಂಟ್ವಾಳ ಪುರಸಭೆಗೆ ಹೆಚ್ಚುವರಿ ಪ್ರಭಾರದಲ್ಲಿ ನಿಯೋಜಿಸಲಾಗಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಾಲೂಕು ವೈದ್ಯಾಧಿಕಾರಿಗಳಿಂದ ನಡೆಸಲಾಗಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.