ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 32 ಮಂದಿ ದಾಖಲು: ಕೊಡಗು ಜಿಲ್ಲಾಧಿಕಾರಿ

Update: 2020-04-25 18:28 GMT

ಮಡಿಕೇರಿ, ಎ.25: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ 32 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ರಾಜ್ಯದ ಇತರೆ ಜಿಲ್ಲೆಗಳ 921 ಹಾಗೂ ಇತರೆ ರಾಜ್ಯದ 24 ಮಂದಿ ಸೇರಿ ಒಟ್ಟು 945 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ.

ಇಲ್ಲಿಯವರೆಗೆ ಒಟ್ಟು 585 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, 431 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 153 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News