ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಆರೋಗ್ಯ ವಿಮೆ ಜಾರಿಯಾಗಲಿ: ಎಐಟಿಯುಸಿ

Update: 2020-04-26 14:24 GMT

ಬೆಂಗಳೂರು, ಎ.26: ಕೊರೋನ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರೋಗ್ಯ ವಿಮೆ ಯೋಜನೆಯನ್ನು ಜಾರಿ ಮಾಡಬೇಕೆಂದು ಎಐಟಿಯುಸಿನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಒತ್ತಾಯ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಭರಮಗೌಡರಿಗೆ ಕೊರೋನ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕೊರೋನ ಸೋಂಕು ತಡೆಗಟ್ಟುವ ಕಾರ್ಯಚರಣೆಯಲ್ಲಿ ಕಾರ್ಯಪಡೆಯ ಸದಸ್ಯರೊಂದಿಗೆ ಗ್ರಾಮದಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ತಿಳುವಳಿಕೆ ನೀಡಿ, ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾಗ ಸೋಂಕು ತಗುಲಿದೆ.

ಈ ಹಿನ್ನೆಲೆಯಲ್ಲಿ ಕೊರೋನ ಸೋಂಕಿನ ನಿಯಂತ್ರಣದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯವಾಗಿ ಸುರಕ್ಷತಾ ಸಾಧನಗಳನ್ನು ಒದಗಿಸಬೇಕು ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ಹಲವು ದಿನಗಳಿಂದ ಮನವಿ ಮಾಡುತ್ತಾ ಬಂದಿದ್ದೇವೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News