ನಿಯಮ ಉಲ್ಲಂಘಿಸಿ ಬಸವ ಮೂರ್ತಿಗೆ ಮಾಲಾರ್ಪಣೆ ಮಾಡಿದ ಸಚಿವ ಪ್ರಭು ಚೌಹಾಣ್

Update: 2020-04-26 17:17 GMT

ಬೀದರ್, ಎ.26: ಬಸವ ಜಯಂತಿಯನ್ನು ಸರಳವಾಗಿ ಮನೆಯಲ್ಲೇ ಆಚರಿಸಿ ಎಂದು ಸರಕಾರ ಸೂಚನೆ ನೀಡಿದ್ದರೂ ನಿಯಮ ಉಲ್ಲಂಘಿಸಿ ಸಚಿವ ಪ್ರಭು ಚೌಹಾಣ್ ಅವರು ಬೀದರ್ ನಗರದಲ್ಲಿ ಬಸವಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ 50 ಜನ ಸೇರಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. 

ಬೀದರ್ ಜಿಲ್ಲೆಯಲ್ಲಿ 15 ಜನರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಸೀಲ್‍ಡೌನ್ ಎಂದು ಘೋಷಿಸಲಾಗಿದೆ. ಆದರೂ ನಿರ್ಬಂಧಿತ ಪ್ರದೇಶದಲ್ಲಿ ಜಿಲ್ಲಾ ಉಸ್ತುವಾರಿ ಪ್ರಭು ಚೌಹಾಣ್, ಜಿಲ್ಲಾಧಿಕಾರಿ ಎಚ್.ಆರ್.ಮಹದೇವ, ಸಂಸದ ಭಗವಂತ ಖೂಬಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಬಸವಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸೀಲ್‍ಡೌನ್ ಜಾರಿಯಲ್ಲಿದ್ದರೂ ಜನಪ್ರತಿನಿಧಿಗಳು ನಿಯಮವನ್ನು ಉಲ್ಲಂಘಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳೇ ಈ ರೀತಿಯಾಗಿ ನಿಯಮವನ್ನು ಉಲ್ಲಂಘಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಬೀದರ್ ನಲ್ಲಿ ಒಟ್ಟು 15 ಕೊರೋನ ಸೋಂಕು ದೃಢಪಟ್ಟಿದ್ದು, ಬೀದರ್ ಅನ್ನು ಕೆಂಪು ವಲಯ ಎಂದು ಘೋಷಿಸಲಾಗಿದೆ. ಆದರೆ ಸಚಿವರೇ ಸರಕಾರದ ಆದೇಶವನ್ನು ಉಲ್ಲಂಘಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News