ಮಂಡ್ಯ: 4 ಮಂದಿ ಕೊರೋನ ಸೋಂಕಿತರು ಗುಣಮುಖ
Update: 2020-04-27 00:09 IST
ಮಂಡ್ಯ, ಎ.27: 16 ಕೊರೋನ ಪಾಸಿಟಿವ್ ಪ್ರಕರಣಗಳಲ್ಲಿ 4 ಜನರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ನಾಲ್ವರನ್ನು 22 ದಿನ ಕ್ವಾರೆಂಟೈನ್‌ನಲ್ಲಿಡಲಾಗಿದ್ದು, ಪರಿಶೀಲನೆ ಮಾಡಿ ಗುಣಮುಖರಾದ ಬಗ್ಗೆ ಖಚಿತಪಡಿಸಿಕೊಂಡು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರೋಗಿಗಳಾದ P171, P172, P173 ಮತ್ತು P184 ಗುಣಮುಖರಾಗಿದ್ದು, ಈಗ ಜಿಲ್ಲೆಯಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 12ಕ್ಕೆ ಇಳಿದಿದೆ.