×
Ad

ಸೋನಿಯಾ ಗಾಂಧಿ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಕ್ರಮಕ್ಕೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೂರು

Update: 2020-04-27 00:32 IST

ಮೈಸೂರು,ಎ.26: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವಹೇಳನ ಮಾಡಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರ್‍ನಾಥ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಎ.23 ಎಂದು ವಿಶ್ವ ಮುದ್ದು ಎಂಬ ವ್ಯಕ್ತಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡು ಘನತೆಗೆ ಧಕ್ಕೆ ತರುವ ರೀತಿ ಅವಾಚ್ಯವಾಗಿ ನಿಂದಿಸಿ ಬರಹ ಪ್ರಕಟಿಸಲಾಗಿದೆ. ಹಾಗಾಗಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News