ಬೆಂಗಳೂರು : ಕೊರೋನ ಸೋಂಕಿತ ವ್ಯಕ್ತಿ ಆತ್ಮಹತ್ಯೆ
Update: 2020-04-27 11:19 IST
ಬೆಂಗಳೂರು, ಎ. 27: ಕೊರೋನ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡದ ಕಿಟಕಿಯಿಂದ ಜಿಗಿದು ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ದೇಶದಲ್ಲೇ ಇದು ಮೊದಲ ದುರ್ಘಟನೆ ಎಂದು ತಿಳಿದುಬಂದಿದೆ.
ಕೊರೋನ ವೈರಸ್ ಸಂಬಂಧ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 466ನೇ ಸೋಂಕಿತ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಸಿರಾಟದ ತೊಂದರೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ, 466ನೇ ರೋಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಟ್ರಾಮ ಕೇರ್ ಸೆಂಟರ್ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತ ಕಿಡ್ನಿ ವೈಫಲ್ಯ ದಿಂದಲೂ ಬಳಲುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಸಚಿವ ಸುಧಾಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಲಿದ್ದು, ಆಸ್ಪತ್ರೆ ವ್ಯಾಪ್ತಿಯಲ್ಲಿ
ಭದ್ರತೆ ಹೆಚ್ಚಿಸಲಿದ್ದಾರೆ.