ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟದ ವಾಹನ ಪ್ರವೇಶಕ್ಕೆ ನಿರ್ಬಂಧ: ಸಚಿವ ಕೋಟ
Update: 2020-04-27 13:02 IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶವನ್ನು ತಕ್ಷಣ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಿನ ಮಾರುಕಟ್ಟೆಗಳಲ್ಲಿ ಸುರಕ್ಷಿತ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ದ.ಕ. ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.