ಲಾಕ್​ಡೌನ್ ಸಂಕಷ್ಟ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ದೇವೇಗೌಡ ಆಗ್ರಹ

Update: 2020-04-27 11:33 GMT

ಬೆಂಗಳೂರು, ಎ.27: ಕೊರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ಪರಿಣಾಮ ರಾಜ್ಯ ವ್ಯಾಪಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ರಾಜ್ಯ ಸರಕಾರ ಬರಬೇಕು. ಜತೆಗೆ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಸೋಮವಾರ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಹಣ್ಣು, ತರಕಾರಿ, ಹೂವು ಬೆಳೆದು ಸಂಕಷ್ಟಕ್ಕೆ ಸಿಲುಕಿ ನಷ್ಟಕ್ಕೆ ಗುರಿಯಾಗಿರುವ ಹಳೇ ಮೈಸೂರು, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ.

ಮಾವು ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿರುವ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾಗಿ ಒಂದು ತಿಂಗಳು ಮುಟ್ಟಿದೆ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ತೊಂದರೆಗೊಳಗಾಗಿದ್ದು, ಈ ಬಗ್ಗೆಯೂ ಸರಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News