ಅನಗತ್ಯ ಸಂಚಾರ: ಹಲವರು ಹೋಂ ಕ್ವಾರಂಟೈನ್ ಗೆ
Update: 2020-04-27 22:37 IST
ಬೆಂಗಳೂರು, ಎ.27: ಲಾಕ್‍ಡೌನ್ ನಡುವೆಯೂ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ ಎಂದು ಇಲ್ಲಿನ ನಂದಿಗುಡಿ ಠಾಣಾ ಪೊಲೀಸರು ತಿಳಿಸಿದ್ದಾರೆ.
ಬೈಲುನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಹಯೋಗದಲ್ಲಿ, ಸುಮಾರು 15ರಿಂದ 20 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಎಲ್ಲರನ್ನು ಜಡಿಗೇನಹಳ್ಳಿ ಬಳಿಯ ಹೋಂ ಕ್ವಾರಂಟೈನ್ ಕೇಂದ್ರದಲ್ಲಿಡಲು ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೈಲುನರಸಾಪುರ ಗ್ರಾಮವನ್ನು ಸೀಲ್‍ಡೌನ್ ಮಾಡಿ ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾಗಿದೆ. ಆದರೂ, ಸ್ಥಳೀಯ ಗ್ರಾಮಸ್ಥರು ಲಾಕ್‍ಡೌನ್ ಉಲ್ಲಂಘಿಸಿ ಸಂಚರಿಸುತ್ತಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು, ಕೆಲವರನ್ನು ಹೋಂ ಕ್ವಾರಂಟೈನ್ ಮಾಡಿದ್ದಾರೆ.