×
Ad

ಕೊರೋನ ಹಿನ್ನೆಲೆ: ಪತ್ರಕರ್ತರಿಗೆ 25 ಲಕ್ಷ ರೂ. ವಿಶೇಷ ವಿಮೆ ಸೌಲಭ್ಯಕ್ಕೆ ಕುಮಾರಸ್ವಾಮಿ ಒತ್ತಾಯ

Update: 2020-04-28 11:34 IST

ಬೆಂಗಳೂರು, ಎ.28: ಕೊರೋನ ವೈರಸ್ ಸೋಂಕು ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರವೂ ಪ್ರಮುಖವಾಗಿದೆ. ಆದ್ದರಿಂದ ರಾಜ್ಯ ಸರಕಾರವು ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂ.ಗಳ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊರೋನ ವಿರುದ್ದದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಪತ್ರಕರ್ತರು ತಮ್ಮ ಜೀವ ಲೆಕ್ಕಿಸಿದೇ ಈ ಮಾರಕ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯ ಸರ್ಕಾರ ಕನಿಷ್ಠ 25 ಲಕ್ಷ ರೂ.ಗಳ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News